ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನಕಾರಿ ಕಾಮೆಂಟ್

ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನಕಾರಿ ಕಾಮೆಂಟ್



ಬೆಂಗಳೂರು, ನವೆಂಬರ್​ 25: ಹಿಂದೂ (Hindu) ಧರ್ಮದ ದೇವರುಗಳ (Gods) ಬಗ್ಗೆ ಸಾಮಾಜಿ ಜಾಲತಾಣದಲ್ಲಿ (Social Media) ಅವಹೇಳನಕಾರಿಯಾಗಿ ಕಾಮೆಂಟ್​ ಹಾಕಿದ ವ್ಯಕ್ತಿಯ ವಿರುದ್ಧ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಹಾಲಕ್ಷ್ಮಿ ಲೇಔಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದೆ. ಅಂಜುಮ್ ಶೇಖ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ (horanadu)ಹೊರನಾಡು ಅನ್ನಪೂರ್ಣೇಶ್ವರಿ, (sringeri)ಶೃಂಗೇರಿ ಶಾರದಂಭೆ, ಮೂಕಾಂಬಿಕೆ ಬಗ್ಗೆ ಕೆಟ್ಟದಾಗಿ ಕಾಮೆಂಟ್​ ಮಾಡಿದ್ದಾನೆ. ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ. ಇಂತವರ ಮೇಲೆ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದರು.

Previous
Next Post »