5 ರೂ. ಏರಿಕೆ ಸಾಧ್ಯತೆ?ನಂದಿನಿ ಹಾಲಿನ ದರ
5 Rs. Possibility of increase? Nandini milk price
ಅಗತ್ಯ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ
ಮತ್ತೊಂದು ಶಾಕ್ ಎದುರಾಗಿದೆ. ನಂದಿನಿ ಹಾಲಿನ ದರ
ಕೂಡ ಶೀಘ್ರವೇ ಏರಿಕೆಯಾಗುವ ಸಾಧ್ಯತೆ ಇದೆ. ನಂದಿನಿ
ಹಾಲಿನ ದರ ಏರಿಕೆ ಕುರಿತು ಕೋಲಾರ ಜಿಲ್ಲಾ ಹಾಲು
ಒಕ್ಕೂಟದ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ
ಸುಳಿವು ನೀಡಿದ್ದು, ನಂದಿನಿ ಹಾಲಿನ ದರ 5 ರೂ. ಏರಿಸಿ, ಆ
ಹಣವನ್ನು ರೈತರಿಗೆ ಕೊಡಲು ಚಿಂತನೆ ಮಾಡಲಾಗುವುದು
ಎಂದು ತಿಳಿಸಿದ್ದಾರೆ. ಈ ಮೂಲಕ ಶೀಘ್ರದಲ್ಲೇ ಹಾಲಿನ ದರ
ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ConversionConversion EmoticonEmoticon