ಉಳ್ಳಾಲ: ಕಾರು ಢಿಕ್ಕಿ ಮಹಿಳೆ ಸ್ಥಳದಲ್ಲೇ ದುರ್ಮರಣ
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರಿನ ಬಳಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲೇ ಅವರು ಸಾವನ್ನಪ್ಪಿರುವ ಘಟನೆ ನಡೆದಿದೆ.ಸಂಜೆ ಪಂಪ್‌ವೆಲ್‌ನ ಅಪಾರ್ಟ್ ಮೆಂಟ್‌ನಲ್ಲಿ ಕೆಲಸಕ್ಕೆ ತೆರಳಲು ರಸ್ತೆ ದಾಟುತ್ತಿದ್ದಾಗ ಘಟನೆ ನಡೆದಿದೆ. ಢಿಕ್ಕಿ ಹೊಡೆದ ಕಾರು ಮತ್ತು ಓವರ್‌ಟೇಕ್ ಮಾಡುತ್ತಿದ್ದ ಇನ್ನೊಂದು ಕಾರು ಕಮರಿಗೆ ಉರುಳಿ ಬಿದ್ದಿದೆ ಎನ್ನಲಾಗಿದೆ.
ಸಾವನ್ನಪ್ಪಿದವರು ಸೇವಂತಿಗುಡ್ಡೆಯ ನಿವಾಸಿ ಕೃಷ್ಣಪ್ಪ ಅವರ ಪತ್ನಿ ಬೇಬಿ (65) ಎಂದು ತಿಳಿದು ಬಂದಿದೆ. ಓವರ್‌ಟೇಕ್ ಭರದಲ್ಲಿದ್ದ ತೊಕ್ಕೊಟ್ಟಿನಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದ ಎರಡು ಕಾರುಗಳಲ್ಲಿ ಒಂದು ಕಾರು ಮಹಿಳೆಗೆ ಢಿಕ್ಕಿಯಾಗಿದೆ.
ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ConversionConversion EmoticonEmoticon