ಹೆಂಡತಿ ಕಾಟಕ್ಕೆ ಕಾನ್​ಸ್ಟೇಬಲ್ ತಿಪ್ಪಣ್ಣ ಆತ್ಮಹತ್ಯೆ!

ಹೆಂಡತಿ ಕಾಟಕ್ಕೆ ಕಾನ್​ಸ್ಟೇಬಲ್ ತಿಪ್ಪಣ್ಣ ಆತ್ಮಹತ್ಯೆ! 


ಬೆಂಗಳೂರು, ಡಿಸೆಂಬರ್ 14: ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್‌ ಆತ್ಮಹತ್ಯೆ ಇಡೀ ದೇಶವನ್ನೇ ಬೆಚ್ಚಿ ಬೀಳಿದೆ. ಹೆಂಡತಿ ಹಾಗೂ ಆಕೆಯ ಕುಟುಂಬದ ಕಿರುಕುಳಕ್ಕೆ ಬೇಸತ್ತ ಅತುಲ್, ಡೆತ್‌ನೋಟ್ ಬರೆದಿಟ್ಟು ವಿಡಿಯೋ ಮಾಡಿ ನೇಣಿಗೆ ಶರಣಾಗಿದ್ದರು. ಅತುಲ್ ಸುಭಾಷ್‌ಗೆ ನ್ಯಾಯ ದೊರಕಿಸಿಕೊಡಬೇಕು ಎಂಬ ಅಭಿಯಾನ ಕೂಡ ದೇಶಾದ್ಯಂತ

 ಶುರುವಾಗಿದೆ. ಈ ಪ್ರಕರಣ ಹಚ್ಚ ಹಸಿರಾಗಿರುವಾಗಲೇ ಬೆಂಗಳೂರಿನಲ್ಲಿ ಇದೇ ರೀತಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.ಮಾವನ ಕಾಟಕ್ಕೆ ಬೇಸತ್ತ ಕಾನ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಯ್ಯಪ್ಪನಹಳ್ಳಿಯಲ್ಲಿ ರೈಲಿಗೆ ತಲೆಕೊಟ್ಟು ಪಿಸಿ ತಿಪ್ಪಣ್ಣ ಸೂಸೈಡ್ ಮಾಡಿಕೊಂಡಿದ್ದಾರೆ. 

ಬಿಜಾಪುರ ಜಿಲ್ಲೆ ಸಿಂದಗಿ ತಾಲೂಕಿನ ಹಂದಿಗನೂರು ಗ್ರಾಮದ ತಿಪ್ಪಣ್ಣ, ಹುಳಿಮಾವು ಪೋಲಿಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಾಗನಾತಪುರದ ಕೃಷ್ಣಪ್ಪಲೇಔಟ್ನಲ್ಲಿ ವಾಸವಿದ್ದರು. ಹೆಂಡತಿ, ಮಾವ ಕಿರುಕುಳ ನೀಡುತ್ತಿದ್ದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ


Previous
Next Post »