‘ಬ್ರಹ್ಮಗಂಟು’ ಸೀರಿಯಲ್ ನಟಿ ಶೋಭಿತಾ ಆತ್ಮಹತ್ಯೆ
![]() |
| ಬ್ರಹ್ಮಗಂಟು’ (Brahmagantu) ಸೀರಿಯಲ್ ನಟಿ ಶೋಭಿತಾ ಆತ್ಮಹತ್ಯೆ |
ಬ್ರಹ್ಮಗಂಟು (Brahmagantu) ಸೀರಿಯಲ್ ನಟಿ ಶೋಭಿತಾ ಶಿವಣ್ಣ (Shobhitha Shivanna) ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ (Suicide) ಕಾರಣವೇನು ಎಂಬುದು ತಿಳಿದು ಬಂದಿಲ್ಲ 2 ವರ್ಷಗಳ ಹಿಂದೆ ಹಾಸನ ಮೂಲದ ಶೋಭಿತಾ ಮದುವೆಯಾಗಿ ಹೈದರಾಬಾದ್‌ನಲ್ಲಿ ಸೆಟಲ್ ಆಗಿದ್ದರು. ಬಣ್ಣದ ಲೋಕದಿಂದ ಅವರು ಅಂತರ ಕಾಯ್ದುಕೊಂಡಿದ್ದರು. ಇದೀಗ ಶೋಭಿತಾ ಆತ್ಮಹತ್ಯೆಯ ಸುದ್ದಿ ಕೇಳಿ, ಕುಟುಂಬಸ್ಥರಿಗೆ ಶಾಕ್ ಕೊಟ್ಟಿದೆ. ಇನ್ನೂ ಮರಣೋತ್ತರ ಪರೀಕ್ಷೆಯ ನಂತರ ನಟಿಯ ಮೃತದೇಹ ಬೆಂಗಳೂರಿಗೆ ತರುವ ಸಾಧ್ಯತೆಯಿದೆ.

ConversionConversion EmoticonEmoticon