LATEST NEWSಅಕ್ರಮ ಮರಳುಗಾರಿಕೆಗೆ ಸಹಕಾರ – ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅಮಾನತು

LATEST NEWSಅಕ್ರಮ ಮರಳುಗಾರಿಕೆಗೆ ಸಹಕಾರ – ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅಮಾನತು

ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು‌ ದಾಖಲಾಗಿತ್ತು. ಅಕ್ರಮ ಮರಳುಗಾರಿಕೆ ನಡೆಸಲು ಕಾಪು ಠಾಣಾಧಿಕಾರಿಯವರು ಸಹಕರಿಸಿದ್ದಾರೆ ಎಂಬುದನ್ನು ತಿಳಿಸುವ ಆಡಿಯೋವೊಂದು ಎಸ್ಪಿ ಡಾ.ಅರುಣ್ ಅವರಿಗೆ ಲಭಿಸಿದ್ದು, ಈ ಆಡಿಯೋವನ್ನು ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲ್ಲುಗುಜ್ಜಿಯವರ ಮೂಲಕ ವಿಚಾರಣೆ ನಡೆಸಿದ್ದಾರೆ. ಡಿವೈಎಸ್ಪಿಯವರ ವರದಿಯಲ್ಲಿ ಕಾಪು ಠಾಣಾಧಿಕಾರಿ ವಿರುದ್ದದ ಆರೋಪವು ಮೇಲ್ನೋಟಕ್ಕೆ ಸಾಭೀತಾದ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ. ಈ ಬಗ್ಗೆ ಮಾತನಾಡಿದ ಅವರು, ಜಿಲ್ಲಾ ಎಸ್ಪಿ ಡಾ.ಅರುಣ್, ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆಯಲ್ಲಿ ಕಾನೂನು ಉಲ್ಲಂಘನೆಯಾಗಿದ್ದು, ಅಧಿಕಾರಿ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಎಸ್ಪಿ ಡಾ. ಅರುಣ್ ಕುಮಾರ್ . ತಿಳಿಸಿದ್ದಾರೆ.


Previous
Next Post »