ನೆಲಮಂಗಲ, ಡಿಸೆಂಬರ್ 16: ದೇಶದಾದ್ಯಂತ ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಪ್ರಕರಣ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ, ಹೆಂಡತಿ, ಮಾವನ ಕಿರುಕುಳಕ್ಕೆ ಬೇಸತ್ತು ಪೊಲೀಸ್ ಕಾನ್‌ಸ್ಟೇಬಲ್ ತಿಪ್ಪಣ್ಣ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಇದರ ಬೆನ್ನಲ್ಲೇ ಮತ್ತೊಂದು ಇಂಥದ್ದೇ ಸ್ಟೋರಿ ನಡೆದಿದೆ ಬೆಂಗಳೂರಿನಲ್ಲಿ. ಹೌದು. ಪತ್ನಿಯ ಕಿರುಕುಳ ಹಾಗೂ ಅಕ್ರಮ ಸಂಬಂಧದಿಂದ ಬೇಸತ್ತು ಬಾಲರಾಜ್(41) ಮನನೊಂದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆ ಸಿಲುವೆಪುರದಲ್ಲಿ ಈ ಘಟನೆ ನಡೆದಿದೆ.18 ವರ್ಷದ ಹಿಂದೆ ಪತ್ನಿ ಕುಮಾರಿಯನ್ನ ಬಾಲರಾಜ್ ಎರಡನೇ ಮದುವೆಯಾಗಿದ್ದರು. ಕಿರುಕುಳದ ಜೊತೆಗೆ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೂಡ ಮಾಡಲಾಗಿದ್ದು, ಗಲಾಟೆ ನಡೆದಿದೆ. ಗಲಾಟೆ ಬಳಿಕ ಮನೆ ತೊರೆದು ಪತ್ನಿ ತವರು ಸೇರಿದ್ದರು. ದಿನದಿಂದ ದಿನಕ್ಕೆ ಇಂತಹ ಘಟನೆಗಳು ಇತ್ತೀಚೆಗೆ ತುಂಬಾ ನಡೆಯುತ್ತಿದೆ ನಮ್ಮ ಸಮಾಜ ಯಾವ ದಿಕ್ಕಿನ ಸಾಗುತ್ತಿದೆ ಎನ್ನುವುದು ನಿರೀಕ್ಷೆಗೂ ಮೀರಿದ ಪ್ರಶ್ನೆಯಾಗಿದೆ

ConversionConversion EmoticonEmoticon