ಬೆಂಗಳೂರು ರಾಜ್ಯದ ನಿವೃತ್ತ ಪೊಲೀಸ್ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ (68) ಅವರನ್ನು ಹರಿತವಾದ ಆಯುಧದಿಂದ ಇರಿದು ಕೊಲೆ ಮಾಡಲಾಗಿದೆ. ಪತಿ ಮೃತಪಟ್ಟಿರುವುದಾಗಿ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದ ಪತ್ನಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಲ್ಲವಿ, ಪೊಲೀಸರು ಮನೆಗೆ ತಲುಪುವಷ್ಟರಲ್ಲಿ ಮನೆಯ 3ನೇ ಮಹಡಿಯಲ್ಲಿನ ಕೊಠಡಿ ಸೇರಿಕೊಂಡಿದ್ದರು. ಮಗಳೊಂದಿಗೆ ಕೊಠಡಿಯ ಬಾಗಿಲು ಹಾಕಿಕೊಂಡಿದ್ದು, ಪ್ರಾಥಮಿಕ ತನಿಖೆ ಪ್ರಕಾರ ಪತ್ನಿ, ಮಗಳು ಓಂ ಪ್ರಕಾಶ್‌ರನ್ನು