ಉಗ್ರರ ದಾಳಿ ಖಂಡಿಸಿ ಇಂದು ಕಾಶ್ಮೀರ ಬಂದ್‌ ಜಮ್ಮು ಕಾಶ್ಮೀರದಲ್ಲಿ ಪಾಕ್ ಮೂಲದ ಉಗ್ರರ ದಾಳಿ ಖಂಡಿಸಿ ಇಂದು ಕಾಶ್ಮೀರ ಬಂದ್ ಮಾಡಲಾಗುತ್ತಿದೆ. ಅಲ್ಲಿನ ವ್ಯಾಪಾರಿ ಸಂಘಟನೆಗಳು ಇಂದು ಬಂದ್‌ಗೆ ಕರೆ ನೀಡಿದ್ದು, ಧಾರ್ಮಿಕ ಸಂಘಟನೆಗಳು ಮತ್ತು ವಕೀಲ

ಸಂಘಟನೆಗಳು ಸಾಥ್ ನೀಡಿವೆ. ಬಂದ್ ಹಿನ್ನೆಲೆಯಲ್ಲಿ ಕಣಿವೆಯ ಎಲ್ಲಾ ಖಾಸಗಿ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ನಿನ್ನೆ ಪಹಲ್ಲಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ ಒಟ್ಟು 26 ಮಂದಿ ಸಾವನ್ನಪ್ಪಿದ್ದರು.