ಅಮಿತ್ ಶಾ ಮಹತ್ವದ ಕ್ರಮ.. ಎಲ್ಲಾ ಪಾಕ್ ವೀಸಾಗಳು ರದ್ದು! ಉಗ್ರರ ದಾಳಿ ಬೆನ್ನಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತಿದ್ದು, ಆಯಾ ರಾಜ್ಯಗಳಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರನ್ನು ಪಾಕಿಸ್ತಾನಕ್ಕೆ ವಾಪಸ್‌ ಕಳುಹಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. .

ಅಧಿಕಾರಿಗಳೊಂದಿಗಿನ ಸಭೆ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಾಕಿಸ್ತಾನಕ್ಕೆ ನೀಡಲಾದ ಎಲ್ಲಾ ರೀತಿಯ ವೀಸಾಗಳನ್ನು ರದ್ದುಗೊಳಿಸಲಾಗಿದೆ. ವಿದ್ಯಾರ್ಥಿ & ವೈದ್ಯಕೀಯ ವೀಸಾಗಳನ್ನು ಸಹ ರದ್ದುಗೊಳಿಸಲಾಗಿದೆ