ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗಂಭೀರ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈಮೇಲ್ ಅನ್ನು ಗುಜರಾತ್‌ನಿಂದ ಜಿಗೇಶ್ ಪರ್ಮಾರ್ ಕಳುಹಿಸಿದ್ದಾರೆ ಎಂದು

ಪೊಲೀಸರು ಪತ್ತೆ ಹಚ್ಚಿದ್ದಾರೆ. ಅವರ ಮಾನಸಿಕ ಸ್ಥಿತಿ ಚೆನ್ನಾಗಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 'ನಿನ್ನನ್ನು ಸಾಯಿಸುತ್ತೇನೆ' ಎಂಬ ಈಮೇಲ್ ಬಂದ ಹಿನ್ನೆಲೆಯಲ್ಲಿ ಗಂಭೀರ್ ಪೊಲೀಸರ ಮೊರೆ ಹೋಗಿದ್ದರು.