ಇಂದು ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ ರಾಜ್ಯದಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಕಳೆದ ಕೆಲವು ದಿನಗಳಿಂದ ಹಲವೆಡೆ ಮಳೆ ಸುರಿದಿದ್ದು, ಕೆಲವೆಡೆ ಅವಾಂತರ ಸೃಷ್ಟಿಯಾಗಿತ್ತು. ಇಂದು ಬೆಂಗಳೂರು ಸೇರಿ ಹಲವು ಕಡೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು

ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಸೇರಿ ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.