ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ "ವೋಗ್ ವಿಸ್ಟಾ 2025" ಫ್ಯಾಶನ್ ಶೋ ಕಾರ್ಯಕ್ರಮ
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ "ವೋಗ್ ವಿಸ್ಟಾ 2025" ಫ್ಯಾಶನ್ ಶೋ ಕಾರ್ಯಕ್ರಮ* ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನ ಫ್ಯಾಶನ್ ಡಿಸೈನಿಂಗ್ ವಿಭಾಗದಿಂದ ವೋಗ್ ವಿಸ್ಟಾ 2025 ಎನ್ನುವ ಫೆಸ್ಟ್ ಅನ್ನು ಸಂಭ್ರಮದಿಂದ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ಸ್ವತಃ ತಾವೇ ವಿನ್ಯಾಸಗೊಳಿಸಿರುವ ಉಡುಪುಗಳ ಪ್ರದರ್ಶನ ಮತ್ತು ರ್‍ಯಾಂಪ್ ವಾಕ್ ನಡೆಯಿತು. ಅನೇಕ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಶರಣ್ ಚಿಲಿಂಬಿ ಡ್ಯಾನ್ಸರ್ ಶ್ರೀಮತಿ ಎಂ.ಎಸ್ ನಾಗವೇಣಿ ನಾಯಕ್ ಪ್ರೊಫೆಸರ್, ವಿಶೇಷ ಅತಿಥಿಯಾಗಿ ಅಜಿಮಾಲ್ ನಟಿ, ಮಾಡೆಲ್ ಹಾಗೂ ಕರಣ್ ಪೂಜಾರಿ
ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಯ ಸಂಸ್ಥಾಪಕರಾದ ಸುಬ್ರಹ್ಮಣ್ಯರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾರ್ಥಿಗಳಿಗೆ ಫ್ಯಾಶನ್ ಡಿಸೈನಿಂಗ್ ಎಂಬುದು ಆಧುನಿಕ ಯುಗದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದಿದೆ ವಿದ್ಯಾರ್ಥಿಗಳು ಇನ್ನೂ ಅನೇಕ ಸಾಧನೆಯನ್ನು ಮಾಡುವಂತಾಗಲಿ ಎಂದು ನುಡಿದು ಶುಭ ಹಾರೈಸಿದರು . ನಿರ್ದೇಶಕಿಯಾದ ಶ್ರೀಮತಿ ಮಮತಾ ಮತ್ತು ಪ್ರಾಂಶುಪಾಲರಾದ ಶ್ರೀಮತಿ ಡಾ. ಸೀಮಾ ಜಿ ಭಟ್ ಮತ್ತು ಶ್ರೀಮತಿ ಅಶ್ವಿನಿ ಪ್ರವೀಣ್ ಫ್ಯಾಷನ್ ಡಿಸೈನಿಂಗ್ ವಿಭಾಗದ ಮುಖ್ಯಸ್ಥೆ ಉಪಸ್ಥಿತರಿದ್ದರು.ಸಂಸ್ಥೆಯ ಎಲ್ಲಾ ಉಪನ್ಯಾಸಕರು ಮತ್ತು ಉಪನ್ಯಾಸಕೇತರ ವೃಂದದವರು,ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ವೃಂದಾ ಸ್ವಾಗತಿಸಿ,ವಿದ್ಯಾರ್ಥಿನಿ ಸ್ಪೂರ್ತಿ ವಂದಿಸಿ, ಕಾರ್ಯಕ್ರಮವನ್ನು ಶಾಹಿದಾ ನಿರೂಪಿಸಿದರು.
About Admin MC3
This is dummy text. It is not meant to be read. Accordingly, it is difficult to figure out when to end it. But then, this is dummy text. It is not meant to be read. Period.

ConversionConversion EmoticonEmoticon