ಉಡುಪಿ ಜಿಲ್ಲೆಯ ಕಾರ್ಕಳ ತಾ. ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ವಿದ್ಯಾರ್ಥಿನಿಯೊಬ್ಬಳು 'ಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ್ ಬೋಲ್' ಎಂದು ಬರೆದಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ವಿದ್ಯಾರ್ಥಿನಿ ಬರೆದಿರುವ ಬರಹ ಈಗ ಎಲ್ಲರ ಆಕ್ರೋಶಕ್ಕೆ

ಕಾರಣವಾಗಿದೆ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇಶ ವಿರೋಧಿ ಬರಹ ಬರೆದ ದೇಶದ್ರೋಹಿ ವಿದ್ಯಾರ್ಥಿನಿಗಾಗಿ ಶೋಧ ನಡೆಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.