ಶ್ರೀ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷನಾಗಿ ಮಾಜಿ ರೌಡಿಶೀಟರ್ ಆಯ್ಕೆ ಭಾರೀ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರನ್ನಾಗಿ ಕಾಂಗ್ರೆಸ್‌ ಮುಖಂಡ, ಮಾಜಿ ರೌಡಿಶೀಟರ್‌ನನ್ನು ಆಯ್ಕೆ ಮಾಡಿದೆ. ದೇವಸ್ಥಾನದ ಆಡಳಿತ

ಮಂಡಳಿಗೆ ದೋಖಾ ಮಾಡಿ ಜೈಲುಪಾಲಾಗಿದ್ದ, ಗ್ರಾಪಂ ಸದಸ್ಯ ಹರೀಶ್ ಇಂಜಾಡಿ ಅಧ್ಯಕ್ಷರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಈತನನ್ನು ಅಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಿದ್ದರು. ಅದರಂತೆ ಹರೀಶ್‌ಗೆ, ಕುಕ್ಕೆ ವ್ಯವಸ್ಥಾಪನಾ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನ ಒಲಿದಿದೆ.