ಗೃಹಲಕ್ಷ್ಮಿ ಬಂದ್‌ ಆಯ್ತಾ?.. ಮಹಿಳೆಯರ ಆಕ್ರೋಶ


ಗೃಹಲಕ್ಷ್ಮಿ ಯೋಜನೆಯ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. 3 ತಿಂಗಳಿಂದ ಹಣ ಬಂದಿಲ್ಲ ಎಂದು ಗದಗ್ ಮಹಿಳೆಯರು ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ. ಗ್ಯಾರಂಟಿ ಯೋಜನೆ ನೀಡಿ ಎಂದು ಯಾರೂ ಕೇಳಿಲ್ಲ. ಚುನಾವಣೆಯಲ್ಲಿ .

ಭರವಸೆ ನೀಡಿ ಮೋಸ ಮಾಡಿದ್ದಾರೆ ಎಂದು ಲಕ್ಷ್ಮೀಶ್ವರದಲ್ಲಿ ಮಹಿಳೆಯರು ಆರೋಪಿಸಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಸುಳ್ಳು ಭರವಸೆ ನೀಡಿದ್ದು, ಇದೀಗ ಯಾವುದನ್ನೂ ಸರಿಯಾಗಿ ನೀಡುತ್ತಿಲ್ಲ. ದಯವಿಟ್ಟು ಹಣ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದಾರೆ