ದೆಹಲಿಯಲ್ಲಿ ಮಳೆ: ವಿಮಾನಗಳ ಹಾರಾಟ ಸ್ಥಗಿತ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಂದು ಮುಂಜಾನೆ ಸುರಿದ ಭಾರೀ ಮಳೆಯಿಂದಾಗಿ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮತ್ತೊಂದೆಡೆ, ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ .

ನಿಲ್ದಾಣದಲ್ಲಿ ಭಾರೀ ಮಳೆಯಿಂದಾಗಿ 100ಕ್ಕೂ ಹೆಚ್ಚು ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ದೆಹಲಿ ವಿಮಾನ ನಿಲ್ದಾಣ ಪ್ರಾಧಿಕಾರವು ಪ್ರಯಾಣಿಕರು ತಮ್ಮ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಕೇಳಿಕೊಂಡಿದೆ