ಕರ್ನಾಟಕದಲ್ಲಿ ಕೊರೋನಾ ನಡುವೆಯೇ ಡೆಂಗ್ಯೂ ಭೀತಿ ಆರಂಭವಾಗಿದೆ. ಈಗಾಗಲೇ ಡೆಂಗ್ಯೂ ಕೇಸ್‌ಗಳ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳು ಇನ್ನಷ್ಟು ಹೆಚ್ಚಾಗಬಹುದು ಎಂಬ ಆತಂಕ ಎದುರಾಗಿದೆ.

ಮಳೆಗಾಲದಲ್ಲಿ ಅನೇಕ ಸಾಂಕ್ರಾಮಿಕ ರೋಗಗಳು ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಈಡಿಸ್ ಈಜಿಪ್ಟಿ ಸೊಳ್ಳೆ ಕಡಿತದಿಂದ ಹರಡುವ ವೈರಲ್ ಕಾಯಿಲೆ ಬರದ ಹಾಗೆ ಮುನ್ನೆಚ್ಚರಿಕೆ ವಹಿಸಬೇಕು.