Webnews kannada-ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ
ಇಂದಿನಿಂದ ಮುಂದಿನ 5 ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 15 ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ
ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಧಾರವಾಡ ಮತ್ತು ಬೆಳಗಾವಿ, ಮೈಸೂರು ಮತ್ತು ಬೀದರ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ನೀಡಲಾಗಿದೆ.

ConversionConversion EmoticonEmoticon