ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನರಹಿತ ಶಾಲೆಗಳಿಗೆ ರಾಜ್ಯ ಸರ್ಕಾರ ಗೈಡ್‌ಲೈನ್ಸ್ ಹೊರಡಿಸಿದೆ. ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ & ಇತರೆ ಲಕ್ಷಣಗಳು ಕಂಡು

ಬಂದಲ್ಲಿ, ಅವರು ಶಾಲೆಗೆ ಬರಕೂಡದು. ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಪಡೆದು, ಗುಣಮುಖರಾದ ಬಳಿಕವೇ ಶಾಲೆಗೆ ಬರಬೇಕು. ಶಾಲಾ ಶಿಕ್ಷಕರು & ಬೋಧಕೇತರ ಸಿಬ್ಬಂದಿಗಳಲ್ಲಿ ಈ ಲಕ್ಷಣಗಳು ಕಂಡು ಬಂದಲ್ಲಿ, ಅಗತ್ಯ ಕ್ರಮಗಳನ್ನು ಪಾಲಿಸಲು ಸೂಚಿಸಿದೆ.